Friday, June 13, 2008

ಕೀರ್ತನೆ

ಕೆ.ವಿ.ತಿರುಮಲೇಶ್


[ಕನ್ನಡ]
ಯನ್ನ ತಲೆಯನ್ನ ಸೋರೆ ಮಾಡಿ
ಯನ್ನ ನರಗಳನ್ನ ತಂತಿ ಮಾಡಿ
ನಿನ್ನ ಸ್ವರೂಪವನ್ನ ಯನ್ನಿಂದ ಧ್ವನಿಸಿ
ಗೊಂಬೆಯಾಟವಯ್ಯಾ ಎಂದು ಕುಣಿಸಿ
ಮಣಿಸಿ ದಣಿಸಿ
ದಾಸರ ದಾಸ ಚಪ್ರಾಸಿ ಮಾಡ್ಕೋ
ತಲೆಮೇಲೆ ಕೂತ್ಕೋ
ಯನ್ನ ನೆತ್ತರು ಕುದಿಸಿ ದಾಮರು ಮಾಡ್ಕೋ
ರೋಡಿಗೆ ಹಾಕ್ಕೋ
ಓಡ್ಸು ಅದರ ಮೇಲೆ ನಿನ್ನ ಇಂಪಾಲಾ
ಯನ್ನ ಚರ್ಮವ ಚಪ್ಪಲಿ ಮಾಡ್ಕೋ
ಹಾಕಿಕೋ ತುಳ್ಕೋ
ಖಂಡವಿದೆಕೋ ಮಾಂಸವಿದಿಕೋ
ಬೇಕಾದ್ರೆ ಬೇಯಿಸ್ಕೋ
ಉಂಡು ತೇಗು ಕ್ಕೊಕ್ಕೋ
ತಗೋ ಯನ್ನ ಮೂಳೆ
ನಿನ್ನ ತ್ರಾಣಕ್ಕೆ ಒಳ್ಳೇದು
ಸೂಪು ಮಾಡಿ ಕುಡೀ.


2 comments:

Anonymous said...

ಸಮಯವಿದ್ದರೆ ನನ್ನ ಬ್ಲಾಗಿನಲ್ಲಿ ಹಾಕಿರುವ ಬೇಡಿಕೆ ಪರಿಶೀಲಿಸುತ್ತೀರಾ?

Anonymous said...

ಕೀರ್‌ತನೆ ತುಂಬಾ ಚನ್ನಾಗಿದೆ...
ಎಂತಹ ಸಮರ್‍ಪಣಾಭಾವಾವೇಶ!

ಯನ್ನ ಎಂಬ ಪದವಿಲ್ಲ. ಎನ್ನ(=ನನ್ನ) ಎಂದು ಮಾಡಿರಿ.